ನವದೆಹಲಿ, ಸೆಪ್ಟೆಂಬರ್ 25 : ಪ್ರಧಾನ ಮಂತ್ರಿ ನರೇಂದ್ರ ಮೋದಿ 'ಪ್ರಧಾನ್ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ'ಯನ್ನು ಘೋಷಣೆ ಮಾಡಿದರು. ದೇಶದ ಪ್ರತಿ ಮನೆಗೂ ವಿದ್ಯುತ್ ಸೌಲಭ್ಯ ಕಲ್ಪಿಸುವುದು ಯೋಜನೆಯ ಗುರಿಯಾಗಿದೆ.
ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಪಂಡಿತ್ ದೀನ್ ದಯಾಳ್ ಉರ್ಜಾ ಭವನವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ನರೇಂದ್ರ ಮೋದಿ 'ಪ್ರಧಾನ್ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ' ಘೋಷಣೆ ಮಾಡಿದರು.
ಯೋಜನೆ ಅನ್ವಯ ಪತ್ರಿಯೊಂದು ಮನೆಗೆ 5 ಎಲ್‌ಇಡಿ ಬಲ್ಪ್, ಫ್ಯಾನು, ಬ್ಯಾಟರಿ ವಿತರಣೆ ಮಾಡಲಾಗುತ್ತದೆ. 2019ರ ಮಾರ್ಚ್ 31ರೊಳಗೆ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ