ನವದೆಹಲಿ: ಶಾಲೆಗಳಲ್ಲಿ ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆಯ
ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ಶುಕ್ರವಾರ ಸುಪ್ರೀಂ ಕೋರ್ಟ್
ಕೇಂದ್ರ ಹಾಗೂ ಎಲ್ಲ ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ.
ಸದ್ಯ ಪ್ರಸ್ತಾವಿತ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಕೋರಿ ಇಬ್ಬರು ಮಹಿಳಾ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಮಿತಾವ ರಾಯ್, ಹಾಗೂ ಎ.ಎಂ. ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಗುರುಗ್ರಾಮದ ರಾಯನ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಶೌಚಾಲಯದಲ್ಲಿ ಏಳು ವರ್ಷದ ಬಾಲಕನನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ ವಿವರಣೆ ಕೋರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.
ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಕೋರಿ ಬಾಲಕನ ತಂದೆ ಬರೂನ್ ಚಂದ್ರ ಠಾಕೂರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯಿಂದಲೂ (ಸಿಬಿಎಸ್‌ಇ) ವಿವರಣೆ ಕೋರಿ, ವಿವರಣೆ ನೀಡಲು ಮೂರು ವಾರಗಳ ಗಡುವು ನೀಡಿತ್ತು.
ಈ ಘಟನೆ ಬಳಿಕ ಸಿಬಿಎಸ್‌ಇ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಮಕ್ಕಳ ಸುರಕ್ಷತೆ ಹಾಗೂ ಭದ್ರತೆ ಕುರಿತು ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸುತ್ತೋಲೆ ಹೊರಡಿಸಿತ್ತು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ