ಹಿರಿಯ ಬಹುಭಾಷಾ ನಟ ಆರ್.ಎನ್ ಸುದರ್ಶನ್ ನಿಧನ:ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕೇತ್ರದಲ್ಲಿ ಅವಕಾಶ ಮಾಡಿಕೊಡಲು ಸಿಎಂ ಸಿದ್ದರಾಮಯ್ಯ ಆದೇಶ - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶುಕ್ರವಾರ, ಸೆಪ್ಟೆಂಬರ್ 8, 2017

ಹಿರಿಯ ಬಹುಭಾಷಾ ನಟ ಆರ್.ಎನ್ ಸುದರ್ಶನ್ ನಿಧನ:ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕೇತ್ರದಲ್ಲಿ ಅವಕಾಶ ಮಾಡಿಕೊಡಲು ಸಿಎಂ ಸಿದ್ದರಾಮಯ್ಯ ಆದೇಶ


ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಆರ್.ಎನ್. ಸುದರ್ಶನ್ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಸೆ.5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರತ್ತಿಹಳ್ಳಿ ನಾಗೇಂದ್ರ ಸುದರ್ಶನ್ ಅವರು, ನಟ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕನ್ನಡ,ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದರು.
ಕಳೆದ ವಾರವಷ್ಟೇ ತಮ್ಮ ಮನೆಯಲ್ಲಿ ಜಾರಿಬಿದ್ದು ಬಲಗಾಲಿನ ಮೂಳೆ ಮುರಿದುಕೊಂಡಿದ್ದ ಅವರ ಆರೋಗ್ಯ ಸ್ಥಿತಿ ನಿನ್ನೆ ಸಂಜೆಯಿಂದ ಬಹಳ ಗಂಭೀರವಾಗಿತ್ತು. ಉಸಿರಾಟದ ತೊಂದರೆ ಉಲ್ಬಣಿಸಿ ಸುದರ್ಶನ್ ತೀವ್ರನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1961ರಲ್ಲಿ ತಮ್ಮ 21 ವಯಸ್ಸಿನಲ್ಲಿ ವಿಜಯನಗರದ ವೀರಪುತ್ರ ಎಂಬ ಕನ್ನಡ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಸುದರ್ಸನ್ ಕಾಲಿಟ್ಟಿದ್ದರು.
ಸುಮಾರು 60 ಚಿತ್ರಗಳಲ್ಲಿ ನಾಯಕನಾಗಿ ನಟಸಿದ ಸುದರ್ಶನ್ ಬಳಿಕ ಸುಮಾರು 260 ಚಿತ್ರಗಳಲ್ಲಿ ವಿಲನ್ ಹಾಗೂ ಪೋಷಕ ನಟನ ಪಾತ್ರದಲ್ಲಿ ನಟಿಸಿದ್ದರು.
ಮಠ, ಸೂಪರ್, ಪುಂಗಿದಾಸ ಚಿತ್ರಗಳಲ್ಲಿ ನಟಿಸಿದ್ದ ಅವರು ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಸ್ವಾಮಿಜಿ ಪಾತ್ರದಲ್ಲಿ ಮಿಂಚಿದ್ದರು. 1975ರಲ್ಲಿ ತೆರೆಕಂಡಿದ್ದ ಶುಭ ಮಂಗಳ ಚಿತ್ರದ ಹೂವೊಂದು ಬಳಿಬಂದು ತಾಕಿತು ಎನ್ನೆದೆಯಾ ಹಾಡು ಸುದರ್ಶನ್ ಅವರ ಧ್ವನಿಯನ್ನು ಇನ್ನೂ ನೆನಪಿಸುತ್ತಿದೆ.
ಅವರ ಮೃತರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕೇತ್ರದಲ್ಲಿ ಅವಕಾಶ ಮಾಡಿಕೊಡಲು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸಿಎಂ, ದೂರವಾಣಿ ಮೂಲಕ ಸಚಿವೆ ಉಮಾಶ್ರೀ ಅವರಿಗೆ ಈ ಕುರಿತು ಸೂಚನೆ ನೀಡಿದ್ದಾರೆ.
ಹೀಗಾಗಿ ಆರ್.ಎನ್.ಸುದರ್ಶನ್ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕೇತ್ರದಲ್ಲಿ ಅವಕಾಶ ಕಲ್ಪಿಸಿಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here