ಬೆಂಗಳೂರು: ಮುಂದಿನ ಎರಡು
ದಿನಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ
ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ
ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ. ಇವುಗಳ ಪ್ರಭಾವದಿಂದ ದಕ್ಷಿಣ
ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ
ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಬೀದರ್, ಗದಗ, ಕಲಬುರ್ಗಿ, ರಾಯಚೂರು, ನಗರ ಮತ್ತು
ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,
ಮಂಡ್ಯ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ
ಎಚ್ಚರಿಕೆ ನೀಡಿದೆ.



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ