ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಇಂದು ರಾತ್ರಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ನಗರದ ರಾಜರಾಜೇಶ್ವರಿ ನಗರದಲ್ಲಿರುವ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
ಗೌರಿ
ಲಂಕೇಶ್ ಅವರು ಮನೆಯ ಹೊರಗೆ ನಿಂತ ವೇಳೆ ಎದೆ ಹಾಗೂ ಹೃದಯ ಭಾಗಕ್ಕೆ ಗುಂಡು
ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ
ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ