ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯಾವುದೇ ಕ್ಷಣದಲ್ಲೂ ಬಾಂಗ್ಲಾ ಉಗ್ರರಿಂದ ದಾಳಿಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ.
ಇಸ್ರೇಲ್ ಹಾಗೂ ಫ್ರಾನ್ಸ್ ಮಾದರಿಯಲ್ಲಿ ಬೆಂಗಳೂರಿನ ದಾಳಿಗೆ ಯೋಜನೆ ರೂಪಿಸಲಾಗಿದೆ. ಬಾಂಗ್ಲಾದೇಶದ ಅಕ್ರಮ ವಲಸಿಗರಿಂದ ದಾಳಿ ನಡೆಯುವ ಸಾಧ್ಯತೆ ಇದೆ. ಬೆಂಗೂರಿನ ಜೊತೆಗೆ ಮಂಗಳೂರಿನಲ್ಲೂ ಕಟ್ಟೆಚ್ಚರ ವಹಿಸಿ ಎಂದು ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಮಡಿಕೇರಿ, ಚಿಕ್ಕಮಗಳೂರಿನ ಕಾಫಿ ಹಾಗೂ ಟೀ ಎಸ್ಟೇಟ್ ಗಳಲ್ಲಿಯೂ ಕೂಲಿ ಕಾರ್ಮಿಕರೊಂದಿಗೆ ಉಗ್ರರು ಸೇರಿಕೊಂಡಿರುವ ಶಂಕೆ ಇದ್ದು ಕಟ್ಟೆಚ್ಚರ ಸೂಚನೆ ನೀಡಲಾಗಿದೆ. ಹಾಗಾಗಿ ನಗರದಲ್ಲಿ ಹೈ ಆಲರ್ಟ್ ಘೋಷಿಸಲಾಗಿದೆ.


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ