ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಚಿತ್ರ 'ಅಂಜನಿಪುತ್ರ' ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.
ಸ್ಕಾಟ್ ಲೆಂಡ್ ಸೇರಿದಂತೆ ವಿವಿಧೆಡೆ ಚಿತ್ರೀಕರಣ ನಡೆಸಲಾಗಿದೆ. ಎ. ಹರ್ಷ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ಅಂಜನಿಪುತ್ರ' ಆರಂಭದಿಂದಲೂ ಕುತೂಹಲ ಮೂಡಿಸಿದೆ.
ಎಂ.ಎನ್. ಕುಮಾರ್, ಜಯಶ್ರೀದೇವಿ ನಿರ್ಮಾಣ ಮಾಡಿರುವ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್, ರಶ್ಮಿಕಾ ಮಂದಣ್ಣ, ಹರಿಪ್ರಿಯಾ, ರಮ್ಯಕೃಷ್ಣ, ಸಾಧುಕೋಕಿಲ, ಚಿಕ್ಕಣ್ಣ, ಮುಖೇಶ್ ತಿವಾರಿ, ವಿ. ಮನೋಹರ್, ಶೋಭರಾಜ್ ಮೊದಲಾದವರು ಅಭಿನಯಿಸಿದ್ದಾರೆ.
ನವೆಂಬರ್ ನಲ್ಲಿ ಚಿತ್ರ ಆಡಿಯೋ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಪುನೀತ್ ರಾಜ್ ಕುಮಾರ್ ಅವರ ಕಂಪನಿಯಿಂದಲೇ ಆಡಿಯೋ ರಿಲೀಸ್ ಗೆ ಪ್ಲಾನ್ ಮಾಡಲಾಗ್ತಿದೆ ಎನ್ನಲಾಗಿದೆ.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ