ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಎಸ್. ಮಂಗಳೂರಿನಲ್ಲಿ ಅಧಿಕಾರ ಸ್ವೀಕಾರ - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಗುರುವಾರ, ಅಕ್ಟೋಬರ್ 19, 2017

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಎಸ್. ಮಂಗಳೂರಿನಲ್ಲಿ ಅಧಿಕಾರ ಸ್ವೀಕಾರ


ಮಂಗಳೂರು, ಅಕ್ಟೋಬರ್ 20: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಎಸ್. ಗುರುವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಶಶಿಕಾಂತ್ ಸೆಂಥಿಲ್ ಈ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು. ಈ ಹಿಂದಿನ ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್ ರನ್ನು ಕೆಲವು ದಿನಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗ ಮಾಡಲಾಗಿತ್ತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here