ಇಂದಿನಿಂದ ಅಮಿತ್ ಷಾ ರಾಜ್ಯ ಪ್ರವಾಸ... - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಮಂಗಳವಾರ, ಮಾರ್ಚ್ 20, 2018

ಇಂದಿನಿಂದ ಅಮಿತ್ ಷಾ ರಾಜ್ಯ ಪ್ರವಾಸ...

ಬೆಂಗಳೂರು,ಮಾ.20- ಇತ್ತ ಕರಾವಳಿ ಜಿಲ್ಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಸಂಘಟನೆಗೆ ಇಂದಿನಿಂದ ರಾಜ್ಯ ಪ್ರವಾಸ ಆರಂಭಿಸಿದ್ದರೆ, ಅತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮಾ.26ರಿಂದ ವಾರ ರಾಜ್ಯಕ್ಕೆ ದಾಂಗುಡಿ ಇಡಲಿದ್ದಾರೆ. ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಯಾವುದೇ ಸಂದರ್ಭದಲ್ಲಿ ಮುಹೂರ್ತ ನಿಗಧಿಪಡಿಸಲು ಸಜ್ಜಾಗಿದೆ. ಇದರ ಸುಳಿವು ಅರಿತಿರುವ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಸರಣಿ ಸಮಾರಂಭಗಳನ್ನು ಹಮ್ಮಿಕೊಂಡಿದೆ.
ಇದೇ 26ರಿಂದ ಮೂರು ದಿನಗಳ ಕಾಲ ಅಮಿತ್ ಷಾ ಅವರು ಈ ಬಾರಿ ಕಾಫಿ ನಾಡು ಚಿಕ್ಕಮಗಳೂರು, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ, ಮಧ್ಯಕರ್ನಾಟಕದ ರಾಜಧಾನಿ ದಾವಣಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ ರಾಜ್ಯ ಘಟಕದ ನಾಯಕರು ಅಮಿತ್ ಷಾ ಅವರ ಪ್ರವಾಸದ ವೇಳಾಪಟ್ಟಿಯನ್ನು ದೆಹಲಿಗೆ ಕಳುಹಿಸಿಕೊಟ್ಟಿದ್ದಾರೆ. ವರಿಷ್ಠರ ಒಪ್ಪಿಗೆ ಸಿಕ್ಕರೆ ನಿಗದಿಯಂತೆ ಪ್ರವಾಸ ಆರಂಭವಾಗಲಿದೆ.
ಮಾ.23 ಇಲ್ಲವೇ 28ರಂದು ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಲಿದ್ದು, ಅಷ್ಟರೊಳಗೆ ಬಿಜೆಪಿ ನಾಯಕರು ರಾಜ್ಯದ ಸುಮಾರು ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಸ ಮಾಡಬೇಕೆಂಬ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಈಗಾಗಲೇ ಪಕ್ಷದ ಪ್ರಮುಖ ಪ್ರಚಾರಕಾರದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ದಾವಣಗೆರೆ ಭಾಗಗಳಲ್ಲಿ ಪ್ರಚಾರ ನಡೆಸಿದ್ದಾರೆ.
ಉಳಿದಿರುವ ಅಂದರೆ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ರಾಯಚೂರು, ವಿಜಾಪುರ ಮತ್ತಿತರ ಕಡೆ ಪ್ರಚಾರ ನಡೆಸುವ ಮೂಲಕ ಚುನಾವಣೆಗೆ ರಣಕಹಳೆ ಮೊಳಗಿಸುವುದು ಕಮಲ ನಾಯಕರ ಲೆಕ್ಕಾಚಾರವಾಗಿದೆ. ಒಂದೆಡೆ ಕಾಂಗ್ರೆಸ್ ತನ್ನ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ರಾಹುಲ್ ಗಾಂಧಿ ಮೂಲಕ ಸಭೆ-ಸಮಾರಂಭ, ರೋಡ್ ಶೋ ನಡೆಸಿ ಪಕ್ಷ ಸಂಘಟಿಸಲು ಒತ್ತು ನೀಡುತ್ತಿದೆ. ನಾವು ಕೂಡ ಹಿಂದೆ ಬೀಳಬಾರದೆಂಬ ಕಾರಣಕ್ಕಾಗಿಯೇ ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕವೇ ಚುನಾವಣೆಗೆ ಸಜ್ಜಾಗುತ್ತಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here