ಬೀದರ್ : ಜಿಂಕೆಗಳನ್ನು ಕೊಂದು ಹೊರ ರಾಜ್ಯಗಳಿಗೆ ಸಾಗಿಸುತ್ತಿದ್ದ ನಾಲ್ಕು ಜನ ಅಂತರಾಜ್ಯ ಬೇಟೆಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ವೈದ್ಯ ಮುಜಾಹಿದ್, ಸೈಯದ್, ಅಜರ್ ಯಾಕುಬ್ ಹಾಗೂ ಬಸವಕಲ್ಯಾಣ ತಾಲೂಕಿನ ಕೋಳಿವಾಡ ಗ್ರಾಮದ ಪ್ರಕಾಶ ಲೊಕ್ಕಣಿಯನ್ನು ಪೊಲೀಸರು ಬಂಧಿಸಿದ್ದು, ಜಿಂಕೆಯ ಮಾಂಸ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂರು ಜಿಂಕೆಗಳನ್ನು ಬೇಟೆಯಾಡಿದ್ದ ಆರೋಪಿಗಳು ಹೈದರಾಬಾದ್ ನಗರಕ್ಕೆ ಸಾಗಿಸುತ್ತಿದ್ದ ವೇಳೆ ಪೊಲೀಸರ ಬಲೆ ಬಿದ್ದಿದ್ದಾರೆ. ಬಂಧಿತರಿಂದ ರೈಫಲ್, 40 ಕ್ಕೂ ಹೆಚ್ಚು ಜೀವಂತ ಗುಂಡುಗಳು, ಮಾರಕಾಸ್ತ್ರಗಳು ಹಾಗೂ 3 ಜಿಂಕೆಯ ತಲೆ, ಕಾಲು, ಮಾಂಸ ಹಾಗೂ ಟಯೋಟಾ ಕ್ರೂಸರ್ ಜೀಪ್ ವಶಪಡಿಸಿಕೊಳ್ಳಲಾಗಿದೆ.
ಘಟನೆ ಸಂಬಂಧ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ