ಮೇ 11 ಮತ್ತು 12 ರಂದು ಶಾಲಾ-ಕಾಲೇಜುಗಳಿಗೆ ರಜೆ - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಗುರುವಾರ, ಏಪ್ರಿಲ್ 26, 2018

ಮೇ 11 ಮತ್ತು 12 ರಂದು ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮೇ 11 ಮತ್ತು 12 ರಂದು ರಜೆ ನೀಡಲಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಮೇ 12 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಎರಡು ದಿನ ರಜೆ ನೀಡಲಾಗಿದೆ ಎಂದು ತಿಳಿಸಿದೆ.
ಇದೇ ವೇಳೆ ಪ್ರಕಟಣೆಯಲ್ಲಿ ಮೇ 11 ರಂದೇ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಆಗಮಿಸುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ. ಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಮತದಾನದ ದಿನದಂದು ಚುನಾವಣಾ ಕಾರ್ಯದಲ್ಲಿ ನಿರತರಾಗಲಿದ್ದಾರೆ. ಅಲ್ಲದೆ, ಬಹುತೇಕ ಎಲ್ಲಾ ಶಾಲಾ-ಕಾಲೇಜುಗಳೇ ಮತಗಟ್ಟೆಗಳಾಗಿರುವುದರಿಂದ ಎರಡೂ ದಿನ ರಜೆ ನೀಡಲಾಗಿದೆ ಅಂತ ತಿಳಿಸಿದೆ.
ಪದವಿ ಪೂರ್ವ ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ಈಗಾಗಲೇ ರಜೆ ಘೋಷಣೆ ಮಾಡಿದೆ. ಅದೇ ರೀತಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಿದೆ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here