ಬಾಗಲಕೋಟೆ : ಎಸ್ಎಸ್ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಬಾದಮಿ ತಾಲೂಕಿನ ಹೂಲಗೇರಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಸಮೀಪದ ಕೆರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಯಂಕಚಿ ಗ್ರಾಮದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಇಂದು ಯಂಕಂಚಿ ಗ್ರಾಮದಿಂದ ನೀರಬೂದಿಹಾಳ ಗ್ರಾಮಕ್ಕೆ ಪರೀಕ್ಷೆ ಬರೆಲಯಲೆಂದು ತೆರಳುತ್ತಿದ್ದರು.
ಈ ವೇಳೆ ಚಾಲಕ ವೇಗವಾಗಿ ಟಾಟಾ ಏಸ್ ಚಾಲನೆ ಮಾಡಿದ ಪರಿಣಾಮ ಪಲ್ಟಿಯಾಗಿದೆ. ಗಾಯಗೊಂಡರವರೆಲ್ಲ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಾಗಿದ್ದು, ಅವರಲ್ಲಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dailyhunt


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ