ಐಪಿಎಲ್: ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 3 ವಿಕೆಟ್ ಜಯ - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಭಾನುವಾರ, ಏಪ್ರಿಲ್ 22, 2018

ಐಪಿಎಲ್: ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 3 ವಿಕೆಟ್ ಜಯ

ಜೈಪುರ್ : ಐಪಿಎಲ್ ಲೀಗ್ ನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಮೂರು ವಿಕೆಟ್ ಗಳ ರೋಚಕ ಗೆಲುವು ದಾಖಲಿಸಿದೆ.
ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು.
ಗುರಿ ಬೆನ್ನತ್ತಿದ ರಾಜಸ್ಥಾನ ತಂಡ ರಂಭಿಕರಾಗಿ ಕಣಕ್ಕಿಳಿದ ರಾಹುಲ್ ತ್ರಿಪಾಠಿ (9) ವಿಕೆಟ್‌ ಒಪ್ಪಿಸಿದರು. ಇದರ ಬೆನ್ನಲ್ಲೇ ನಾಯಕ ರಹಾನೆ(14) ಸಹ ವೈಫಲ್ಯ ಅನುಭವಿಸಿದರು.
ಇದರೊಂದಿಗೆ 38 ರನ್ ಗಳಿಸುವಷ್ಟರಲ್ಲಿ ತಂಡವು ಪ್ರಮುಖ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ತದನಂತರ ಜತೆಗೂಡಿದ ಸಂಜು ಸ್ಯಾಮ್ಸನ್ ಹಾಗೂ ಬೆನ್ ಸ್ಟೋಕ್ಸ್ ಉತ್ತಮ ಜತೆಯಾಟ ಪ್ರದರ್ಶಿಸಿದರು. ತಂಡ 10 ಓವರ್‌ಗಳಲ್ಲಿ 70ರನ್‌ಗಳಿಸಿತು. ಕೊನೆ 10 ಓವರ್‌ನಲ್ಲಿ ತಂಡಕ್ಕೆ 98ರನ್‌ಗಳ ಅವಶ್ಯಕತೆ ಇತ್ತು.
ಈ ಹಂತದಲ್ಲಿ 40 ರನ್ ಗಳಿಸಿದ ಸ್ಟೋಕ್ಸ್, ಹಾರ್ದಿಕ್ ಪಾಂಡ್ಯ ಓವರ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆಗಿ ನಿರಾಸೆ ಮೂಡಿಸಿದರು. ಇದರ ಮಧ್ಯೆ 17ನೇ ಓವರ್‌ನಲ್ಲಿ ಸಂಜು ಸ್ಯಾಮ್ಸನ್ (52) ಜೊಸ್ ಬಟ್ಲರ್ (6) ವಿಕೆಟ್‌ ಕಬಳಿಸಿದ ಜಸ್‌ಪ್ರೀತ್‌ ಬುಮ್ರಾ ಡಬಲ್ ಆಘಾತ ನೀಡಿದರು.
ಈ ಹಂತದಲ್ಲಿ ತಂಡಕ್ಕೆ 1 7 ಎಸೆತಗಳಲ್ಲಿ 43ರನ್‌ಗಳ ಅಗತ್ಯವಿತ್ತು. ಈ ವೇಳೆ ಕ್ರೀಸಿಗಿಳಿದ ಕನ್ನಡಿಗ ಕೆ.ಗೌತಮ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ರಾಜಸ್ಥಾನಕ್ಕೆ ರೋಚಕ ಗೆಲುವನ್ನು ಒದಗಿಸಿಕೊಟ್ಟರು. 3 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದಂತೆ ಕೇವಲ 11 ಎಸೆತಗಳಲ್ಲಿ ಅಜೇಯ 33 ರನ್ ಚಚ್ಚಿದ ಗೌತಮ್ ರಾಜಸ್ಥಾನಕ್ಕೆ ರೋಚಕ ಗೆಲುವು ತಂದುಕೊಟ್ಟರು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here