ಕೋಲ್ಕತ್ತಾ : ಪ್ರಸ್ತಕ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳು ಈಗಾಗಲೇ ಆರಂಭಗೊಂಡಿದ್ದು, ಟೂರ್ನಿಯಲ್ಲಿ ಎಬಿ ಡಿವಿಲಿಯರ್ಸ್ ಹೊಸ ದಾಖಲೆ ಬರೆದಿದ್ದಾರೆ.
ಹೌದು, ನಿನ್ನೆ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಎಬಿಡಿ ವಿಲಿಯರ್ಸ್ ಅತಿ ಹೆಚ್ಚು ಸಿಕ್ಸರ್ ಸಿಡಿಸದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿರುವ ಎಬಿಡಿ ನಿನ್ನೆ ನಡೆದ ಪಂದ್ಯದಲ್ಲಿ 5 ಸಿಕ್ಸರ್ ಸಿಡಿಸಿದ್ದು, ಒಟ್ಟು ಐಪಿಎಲ್ ನಲ್ಲಿ 161 ಸಿಕ್ಸರ್ ಸಿಡಿಸಿದಂತಾಗಿದೆ. ಇನ್ನು ಟೂರ್ನಿಯಲ್ಲಿ ಕ್ರಿಸ್ ಗೇಲ್ ಅವರು ಒಟ್ಟು 265 ಸಿಕ್ಸರ್ ಸಿಡಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ