ಚಿಕ್ಕಮಗಳೂರು/ಶಿವಮೊಗ್ಗ: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಡ ಗ್ರಾಮದ ಬಳಿ ಗುರುವಾರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನವರು ಎಂದು ಗುರುತಿಸಿಲಾಗಿದೆ. ಶಿವಮೊಗ್ಗದಿಂದ ಕೊಡ್ಲಿಪೇಟೆಗೆ ಹೋಗಿ ಚಿಕ್ಕಮಗಳೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ ಅಂತ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಕಾರು ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮತ್ತೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮೃತರನ್ನ ಚಾಲಕ ನಿಂಗೇಶ್, ದೀಪಾ ಹಾಗೂ ಶ್ರೇಯಾ ಎಂದು ಗುರುತಿಸಲಾಗಿದೆ. ಮಗು ಜೇಷ್ಠ ಹಾಗೂ ಇನ್ನಿಬ್ಬರಿಗೆ ತೀವ್ರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯಲಾಗಿದೆ. . ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ