ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿ, ಧಾರವಾಡ, ದಾವಣಗೆರೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿ ಕೆಪಿಟಿಸಿಎಲ್ ನ ಇಎ ಯ ಶಿರೂರು ಪಾರ್ಕ್ ನಲ್ಲಿರುವ ಸವಣೂರು ಮನೆ ಮೇಲೆ ಎಸಿಬಿ ಡಿವೈಎಸ್ ಪಿ ವಿಜಯ್ ಕುಮಾರ್ ಬಿಸನಳ್ಳಿ ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಇನ್ನು ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡದ ಎಸಿಎಫ್ ಪಾರ್ಶ್ವನಾಥ ವರೂರ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಡ್ರಳ್ಳಿ ಗ್ರಾಪಂ ಪಿಡಿಒ ನಾಗರಾಜ್ ಮನೆ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ