ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಗುರುವಾರ, ಏಪ್ರಿಲ್ 26, 2018

ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿ ಹಾಗೂ ಇತರೆಡೆ ದಾಳಿ ನಡೆಸಿ ಹಲವು ಅಕ್ರಮ ಸಂಪಾದನೆಯನ್ನು ಪತ್ತೆ ಹಚ್ಚಿದ್ದಾರೆ. ಚಿತ್ರದುರ್ಗ, ಬಾಗಲಕೋಟೆ, ಕೋಲಾರ ಸೇರಿದಂತೆ ಇತರೆಡೆ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪತಿ ಅವರ ಕಮನಬಾವಿ ಬಡಾವಣೆಯಲ್ಲಿರುವ ಮನೆ ಹಾಗೂ ಚಳ್ಳಕೆರೆ ತಾಲ್ಲೂಕಿನ ಮನಮೈನ ಹಟ್ಟಿ ಗ್ರಾಮದಲ್ಲಿರುವ ಮನೆ ಹಾಗೂ ಪಟ್ಟಣದಲ್ಲಿರುವ ಕಚೇರಿಯಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ತಪಾಸಣೆ ಕಾರ್ಯ ಕೈಗೊಂಡಿದ್ದು , ಹಲವೆಡೆ ಇರುವ ನಿವೇಶನ , ಕೃಷಿ ಜಮೀನು ಹಾಗೂ ವಿವಿಧ ಬ್ಯಾಂಕ್‍ಗಳಲ್ಲಿ ಇಟ್ಟಿದ್ದ ಠೇವಣಿ, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಾಗಲಕೋಟೆಯಲ್ಲಿ ಕಂದಾಯ ನಿರೀಕ್ಷಕ ಸಂಗಪ್ಪ ಸೂಡಿ ಅವರ ಮಹಾಲಂಗಿಪುರ ದಲ್ಲಿರುವ ಮನೆ ಹಾಗೂ ಮುಧೋಳದಲ್ಲಿರುವ ಅವರ ಕಚೇರಿಯಲ್ಲಿ ಕಡತಗಳನ್ನು ಪರಿಶೀಲಿಸಲಾಗಿದೆ. ಎಸ್ಪಿ ಅಮರನಾಥ ರೆಡ್ಡಿ ಹಾಗೂ ಡಿವೈಎಸ್ಪಿ ಮಲ್ಲೇಶ ಮಹಾಮನಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು , ಹಲವು ಚರಾಚರ ಆಸ್ತಿಗಳ ದಾಖಲೆಗಳು ಪತ್ತೆಯಾಗಿದೆ. ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ಪ್ರಥಮ ದರ್ಜೆ ಸಹಾಯಕ ಮುನಿ ವೆಂಕಟಪ್ಪ ಅವರು ಅಕ್ರಮ ಆಸ್ತಿ ಗಳಿಕೆ ಹಾಗೂ ಆದಾಯಕ್ಕೆ ಮೀರಿ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಎಸಿಬಿ ದಾಳಿ ನಡೆಸಿದೆ.
ಮುಳಬಾಗಿಲಿನಲ್ಲಿನ ಮುತ್ಯಾಲಪೇಟೆಯಲ್ಲಿರುವ ಮನೆ, ಪಲ್ಲ ಶೆಟ್ಟಿ ಹಳ್ಳಿಯಲ್ಲಿರುವ ಫಾರಂ ಹೌಸ್ ಹಾಗೂ ಕಚೇರಿಯ ಮೇಲೆ ಇಂದು ಬೆಳಗ್ಗೆ 6 ಗಂಟೆಯಲ್ಲಿ ಏಕ ಕಾಲದಲ್ಲಿ ದಾಳಿ ನಡೆದಿದ್ದು , ಇಲ್ಲಿ ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ಬೆಂಗಳೂರು ಸೇರಿದಂತೆ ಇತರೆಡೆ ಇರುವ ನಿವೇಶನಗಳ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಡಿವೈಎಸ್ಪಿಗಳಾದ ಮೋಹನ್, ಕೋದಂಡರಾಮಯ್ಯ ಮತ್ತು ಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here