ಸಿನಿಮಾಡೆಸ್ಕ್ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರ ಚಿತ್ರದ ಹಾಡುಗಳು ಸದ್ಯದಲ್ಲೇ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.
ಬಹುತಾರಾಗಣದಲ್ಲಿ ನಿರ್ಮಾಣವಾಗಿರುವ ಕುರುಕ್ಷೇತ್ರ ದರ್ಶನ್ ಅಭಿನಯದ 50 ನೇ ಚಿತ್ರವಾಗಿದೆ. ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ವಿಶೇಷವಾದ ಸೆಟ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರಕ್ಕೆ ಮುನಿರತ್ನ ಅವರ ಬಂಡವಾಳ ಹಾಕಿದ್ದು, ಅವರ ನಿರ್ಮಾಣದಲ್ಲಿ ಚಿತ್ರ ಮೂಡಿ ಬರುತ್ತಿದೆ.
ಈಗಾಗಲೇ ಕುರುಕ್ಷೇತ್ರದ ಚಿತ್ರದ ಆಡಿಯೋ ದುಬಾರಿ ಬೆಲೆಗೆ ಮಾರಾಟವಾಗಿದ್ದು, ಇದೇ ತಿಂಗಳು ಆಡಿಯೋ ಬಿಡುಗಡೆ ಮಾಡುವ ಚಿತ್ರತಂಡ ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಏಪ್ರಿಲ್ ಅಂತ್ಯಕ್ಕೆ ಕುರುಕ್ಷೇತ್ರದ ಹಾಡುಗಳು ರಿಲೀಸ್ ಆಗಬಹುದು ಎನ್ನಲಾಗಿದೆ. ವಿ.ಹರಿಕೃಷ್ಣ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ