ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆಯಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲ ಭಾಗದಲ್ಲಿ ಮೇ. 19 ರಿಂದ ಗುಡುಗು ಸಿಡಿಲು ಸಹಿತ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಅರಬ್ಬಿ ಸಮುದ್ರದ ನೈರುತ್ಯ ಭಾಗದಲ್ಲಿ ಗಲ್ಫ್ ಆಫ್ ಏಡನ್ ನಲ್ಲಿ ನಿರ್ಮಾಣವಾಗಿರುವ ಸಾಗರ ಚಂಡ ಮಾರುತದ ಪ್ರಭಾವದಿಂದಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಹಾಗೂ ಮಲೆನಾಡಿನ ಕೆಲವೆಡೆ ಮೇ. 22 ರವರೆಗೂ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಇದೆ ಇಲಾಖೆ ತಿಳಿಸಿದೆ.


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ